Loading Now

PSI ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

PSI ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ (PSI Scam) ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ (State Government) ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ (Karnataka High court) ಆದೇಶ ನೀಡಿದೆ. ಅಂದರೆ 545 ಪಿಎಸ್‌ಐಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಮತ್ತು ಬಳಿಕ ಪ್ರಕಟಿಸಿದ ನೇಮಕಾತಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್‌ ಅವಕಾಶ ಮಾಡಿಕೊಟ್ಟಿದೆ.


ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಇದು ಮರುಪರೀಕ್ಷೆ ಬೇಡ, ಕಳಂಕಿತರನ್ನು ಹೊರತುಪಡಿಸಿ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದ್ದ ಅಭ್ಯರ್ಥಿಗಳ ಪರ ದಾವೆಯನ್ನು ತಿರಸ್ಕರಿಸಲಾಗಿದೆ.

ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಬಿಜೆಪಿ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಒಂದು ಹಂತದಲ್ಲಿ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್‌ ಎಲ್ಲ ಅರ್ಜಿಗಳ ವಿಚಾರಣೆಯನ್ನು ನಡೆಸಿತ್ತು. ಕೆಲವು ದಿನಗಳ ಹಿಂದೆ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪನ್ನು ನವೆಂಬರ್‌ 10ಕ್ಕೆ ನಿಗದಿ ಮಾಡಿತ್ತು.


ಪಿಎಸ್‌ಐ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಪೀಠವು ಆಗಸ್ಟ್‌ 4ರ ವಿಚಾರಣೆಯಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರವು ಪೀಠಕ್ಕೆ ಸಲ್ಲಿಸಿತ್ತು.

Spread the informaton

Post Comment

You cannot copy content of this page