Loading Now

ಮತ್ತೆ ಕೋವಿಡ್ 19 ! BE ALERT

ಮತ್ತೆ ಕೋವಿಡ್ 19 ! BE ALERT

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್‌ – 19 ಪರಿಸ್ಥಿತಿ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿ, ಚರ್ಚಿಸಿದರು.


ಡಿಸಿಎಂ ಶ್ರೀ ಡಿ ಕೆ ಶಿವಕುಮಾರ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಗೃಹ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವ ಡಾ|| ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕೋವಿಡ್‌ -19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯ ಮುಖ್ಯಾಂಶಗಳು:


ಕೋವಿಡ್‌- 19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಅದರಲ್ಲೂ JN.1 ಎಂಬ ಹೊಸ ತಳಿಯ ವೈರಸ್‌ ಪತ್ತೆಯಾಗಿದೆ.
ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ. ಕರ್ನಾಟಕದಲ್ಲಿ ಪ್ರಸ್ತುತ 92 Active COVID Cases ವರದಿಯಾಗಿವೆ. ಕೇರಳದಲ್ಲಿ 2,041, ತಮಿಳು ನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 Active cases ಇವೆ. ರಾಜ್ಯದಲ್ಲಿರುವ ಒಟ್ಟು 92 Active COVID Case ಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (Home Isolation). 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾಳೆಯಿಂದ ಎಲ್ಲಾ ತಾಲೂಕ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದಿದ್ದು ಈ ಕುರಿತು ಆಕ್ಸಿಜನ್ ಹಾಗೂ ಬೆಡ್ ವ್ಯವಸ್ಥೆ ಕಲ್ಪಿಸಿಕೊಡಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿದ ಲಿಂಕ್ ಒತ್ತಿರಿ

Spread the informaton

Post Comment

You cannot copy content of this page